Dark Light

Blog Post

Namma Bagalkot > News > Bagalkot > Honouring the Children of Pour Karmiks: ಪೌರ ಕಾರ್ಮಿಕರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಮತ್ತು ಅರಿವು ಕಾರ್ಯಾಗಾರ

Honouring the Children of Pour Karmiks: ಪೌರ ಕಾರ್ಮಿಕರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಮತ್ತು ಅರಿವು ಕಾರ್ಯಾಗಾರ

District Administration Honours Children of Pour Karmiks

ಬಾಗಲಕೋಟೆ: ಪೌರ ಕಾರ್ಮಿಕರ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಅಭಿವೃದ್ದಿಗೆ ಆಯೋಗವು ಬದ್ದವಾಗಿದೆ ಎಂದು ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಶಿವಣ್ಣ ಕೋಟೆ ಹೇಳಿದರು.

ಜಿಲ್ಲಾಡಳಿತ ಭವನದಲ್ಲಿರುವ ಆಡಿಟೋರಿಯಂ ಹಾಲ್‍ನಲ್ಲಿ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗ ಮತ್ತು ಅಭಿವೃದ್ದಿ ನಿಗಮ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡ ಸಫಾಯಿ ಕರ್ಮಚಾರಿಗಳ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಮತ್ತು ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪೌರ ಕಾರ್ಮಿಕರ ಮಕ್ಕಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಪ್ರತಿಭಾ ಪುರಸ್ಕಾ ನೀಡಲಾಗುತ್ತಿದೆ ಎಂದರು.

ಪೌರ ಕಾರ್ಮಿಕರು ಆರೋಗ್ಯದ ಕಡೆ ಹೆಚ್ಚಿನ ಕಾಳಜಿ ವಹಿಸಬೇಕು. ಹೆಚ್ಚು ಎಂದರೆ 40 ರಿಂದ 50 ವರ್ಷದವರೆಗೆ ಬಾಳುತ್ತಿದ್ದಾರೆ. ಪೌರ ಕಾರ್ಮಿಕರು ಆರ್ಥಿಕವಾಗಿ, ಸಾಮಾಜಿಕವಾಗಿ ಅಭಿವೃದ್ದಿ ಹೊಂದುವಂತೆ ಮಾಡಲು 2017 ರಲ್ಲಿ ಅಲ್ಪ ಸ್ವಲ್ಪ ಪೌರ ಕಾರ್ಮಿಕರ ಹುದ್ದೆಗಳನ್ನು ಖಾಯಂ ಗೊಳಿಸಲಾಯಿತು. ಆದರೆ ಬಸವರಾಜ ಬೊಮ್ಮಾಯಿ ನೇತೃತ್ವದ ಸರಕಾರ ಬಂದ ಮೇಲೆ ಪೌರ ಕಾರ್ಮಿಕರ ಹುದ್ದೆ ಖಾಯಂ ಗೊಳಿಸುವ ಸಲುವಾಗಿ ಮೂರು ವರದಿಗಳನ್ನು ಮುಖ್ಯ ಮಂತ್ರಿಗಳಿಗೆ ನೀಡಲಾಗಿದೆ. ಪೌರ ಕಾರ್ಮಿಕರ ಬಗ್ಗೆ ಮುಖ್ಯಮಂತ್ರಿಗಳಿಗೆ ಹೆಚ್ಚಿನ ಕಾಳಜಿ ಹೊಂದಿದ್ದಾರೆ ಎಂದರು.

ಅಧ್ಯಕ್ಷತೆಯನ್ನು ವಹಿಸಿದ್ದ ಶಾಸಕ ವೀರಣ್ಣ ಚರಂತಿಮಠ ಮಾತನಾಡಿ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಗುತ್ತಿಗೆ ಆಧಾರ ಮೇಲೆ ಕಾರ್ಯನಿರ್ವಹಿಸುತ್ತಿರುವ ಪೌರ ಕಾರ್ಮಿಕರನ್ನು ಖಾಯಂ ಗೊಳಿಸಬೇಕಿದೆ. ಈಗಾಗಲೇ ಜಿಲ್ಲೆಯಲ್ಲಿ 450 ಖಾಯಂ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಉಳಿದರನ್ನು ಸಹ ಖಾಯಂ ಗೊಳಿಸಲು ಹೊಸ ಹುದ್ದೆಗಳನ್ನು ಸೃಷ್ಟಿ ಮಾಡಿ ನೇಮಕ ಮಾಡಲು ಆಯೋಗಕ್ಕೆ ಸಲಹೆ ನೀಡಿದರು. ಪೌರ ಕಾರ್ಮಿಕರು ಆರೋಗ್ಯದ ಕಡೆ ಹೆಚ್ಚಿನ ಕಾಳಜಿ ವಹಿಸಿ ತಮ್ಮ ಮಕ್ಕಳನ್ನು ಶಿಕ್ಷಣವಂತರನ್ನಾಗಿ ಮಾಡಲು ಮುಂದಾಗಬೇಕು ಎಂದರು.

ವಿಧಾನ ಪರಿಷತ್ ಸದಸ್ಯ ಪಿ.ಎಚ್.ಪೂಜಾರ ಮಾತನಾಡಿ ಸಫಾಯಿ ಕರ್ಮಚಾರಿಗಳ ದುಡಿಮೆಗೆ ತಕ್ಕ ಪ್ರತಿಫಲ ಸಿಗುವಂತಾಗಬೇಕು. ಅಸಂಘಟಿತ ಕಾರ್ಮಿಕರ ಕುಟುಂಬಗಳಲ್ಲಿ ಹೆಚ್ಚಾಗಿ ಕಂಡುಬರುತ್ತಿದ್ದು, ಅವರ ಶ್ರೇಯಸ್ಸಿಗಾಗಿ ಆಯೋಗ ಶ್ರಮಿಸುತ್ತಿದೆ. ಊರು ಸ್ವಚ್ಛವಾಗಿದ್ದರೆ ದೇಶ ಸ್ವಚ್ಚವಾಗಿರಲು ಸಾಧ್ಯವೆಂದರು. ಬುಡಾದ ಅಧ್ಯಕ್ಷ ಬಸವಲಿಂಗಪ್ಪ ನಾವಲಗಿ ಮಾತನಾಡಿ ನಗರವನ್ನು ಸ್ವಚ್ಚವಾಗಿಡುವವರು ಪೌರಕಾರ್ಮಿಕರಾಗಿದ್ದು, ಅವರನ್ನು ಮುಖ್ಯ ವಾಹಿನಿಗೆ ತರುವ ಕಾರ್ಯವಾಗಬೇಕು ಎಂದರು. ನಗರಸಭೇ ಜ್ಯೋತಿ ಭಜಂತ್ರಿ ಮಾತನಾಡಿ ಕೋವಿಡ್ ಸಂದರ್ಭದಲ್ಲಿ ಸಾಕಷ್ಟು ಶ್ರಮಿಸಿದವರು ಪೌರ ಕಾರ್ಮಿಕರು. ಕಾರ್ಮಿಕರು ತಮ್ಮ ಮಕ್ಕಳಿಗೆ ಶಿಕ್ಷಣ ನೀಡು ಉನ್ನತ ಸ್ಥಾನ ಪಡೆಯುವಂತಾಗಬೇಕು ಎಂದರು.

ಜಿಲ್ಲಾಧಿಕಾರಿ ಪಿ.ಸುನೀಲ್‍ಕುಮಾರ ಮಾತನಾಡಿ ಜಿಲ್ಲೆಯಲ್ಲಿ 15 ನಗರ ಸ್ಥಳೀಯ ಸಂಸ್ಥೆಗಳಲ್ಲಿ ಒಟ್ಟು 963 ಪೌರ ಕಾರ್ಮಿಕರು ಕೆಲಸ ಮಾಡುತ್ತಿದ್ದು, ಅದರಲ್ಲಿ 450 ಖಾಯಂ ಪೌರ ಕಾರ್ಮಿಕರಿದ್ದಾರೆ. ಕಾರ್ಮಿಕರು ಸಮಾಜದ ಆರೋಗ್ಯವನ್ನು ಕಾಪಾಡುವ ವೈದ್ಯರಾಗಿದ್ದಾರೆ. ಎಸ್‍ಸಿಪಿ, ಟಿಎಸ್‍ಪಿ ಯೋಜನೆಯಡಿ ಶೇ.20 ರಷ್ಟು ಅನುದಾನವನ್ನು ಮೀಸಲಿರಿಸಿದ್ದು, ಅದರ ಸದುಪಯೋಗಕ್ಕೆ ಕ್ರಮವಹಿಸಲಾಗುತ್ತಿದೆ. ಈಗಾಗಲೇ ಮೀಸಲಿರಿಸಿದ ಅನುದಾನದಲ್ಲಿ ಶೇ.60 ರಷ್ಟು ಕೆಲಸವಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಸಫಾಯಿ ಕರ್ಮಚಾರಿ ಆಯೋಗದ ಕಾರ್ಯದರ್ಶಿ ಚಂದ್ರಕಲಾ, ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಜಿ.ಪಂ ಉಪಕಾರ್ಯದರ್ಶಿ ಎನ್.ವೈ.ಬಸರಿಗಿಡದ, ಉಪವಿಭಾಗಾಧಿಕಾರಿಗಳಾದ ಶ್ವೇತಾ ಬೀಡಿಕರ, ಸಂತೋಷ ಕುಲಗೊಂಡ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ನಂದಾ ಹಣಮರಟ್ಟಿ, ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕ ರಮೇಶ ಬಿ.ಎಸ್, ನಗರಸಭೆ ಅಧ್ಯಕ್ಷೆ ನಾಗರತ್ನ ಹೆಬ್ಬಳ್ಳಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಪ್ರಾರಂಭದಲ್ಲಿ ನಿರುಪಯುಕ್ತ ವಸ್ತುಗಳಿಂದ ಪೌರಕಾರ್ಮಿಕರು ಸಿದ್ದಪಡಿಸಿದ ಅಲಂಕಾರಿಕ ವಸ್ತುಗಳ ವಸ್ತು ಪ್ರದರ್ಶನ ಏರ್ಪಡಿಸಲಾಗಿತ್ತು. ಪ್ರದರ್ಶನದಲ್ಲಿ ರಬಕವಿ-ಬನಹಟ್ಟಿ ನಗರಸಭೆ ಪ್ರಥಮ ಸ್ಥಾನ ಪಡೆದರೆ, ಮಹಾಲಿಂಗಪೂರ ಪುರಸಭೆ ದ್ವಿತೀಯ ಹಾಗೂ ಲೋಕಾಪೂರ ಪಟ್ಟಣ ಪಂಚಾಯತಿ ತೃತೀಯ. . .
ಪ್ರತಿಭಾ ಪುರಸ್ಕಾರ

ಎಸ್.ಎಸ್.ಎಲ್.ಸಿ, ಪಿಯುಸಿ, ಪದವಿ ವಿಭಾಗದ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ಗ್ರಾಮೀಣ ಭಾಗದ ಸ್ವಚ್ಛತಾಗಾರರ ಮಕ್ಕಳಿಗೆ ಪುರಸ್ಕಾರ ನೀಡಲಾಯಿತು. ಎಸ್.ಎಸ್.ಎಲ್.ಸಿಯಲ್ಲಿ ಚಿಕ್ಕಶೇಲ್ಲಿಕೇರಿಯ ಯಮನವ್ವ ಮಾದರ, ಹೆಬ್ಬಾಳನ ಭರಮಪ್ಪ ಮಾದರ, ನಾಗರಾಳಿನ ಅಜಯ ರಾಘವೇಂದ್ರ ಮಾದರ, ಗಿರಿಸಾಗರದ ಸಿದ್ದಪ್ಪ ಮೇತ್ರಿ, ಹೂವಿನಹಳ್ಳಿಯ ವಿಠಲ ಮಾದರ, ನಂದವಾಡಗಿಯ ಮುತ್ತಣ್ಣ ಮಾದರ, ಮಳಲಿಯ ಕಲ್ಮೇಶ ಬೆಳಗಲಿ, ಅನಗವಾಡಿಯ ರಮೇಶ ಮಾದರ ಗುಡೂರ ಎಸ್‍ಸಿಯ ಮಂಜುನಾಥ ಮಾದರ, ಸಿದ್ದರಾಯ ಸದಾಶಿವ, ಪಿಯುಸಿ ವಿಭಾಗದಲ್ಲಿ ತೊದಲಬಾಗಿಯ ವಿಠಲ ಅಲಗೂರ, ಪದವಿ ವಿಭಾಗದಲ್ಲಿ ಯಲ್ಲವ್ವ ಮಾದರ ಅವರಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.

Leave a comment

Your email address will not be published. Required fields are marked *