Dark Light

Blog Post

Namma Bagalkot > News > Bagalkot > More Efforts for Academic Results:ಎಸ್‌ಎಸ್‌ಎಲ್‌ಸಿ, ಪಿಯುಸಿ ಉತ್ತಮ ಫಲಿತಾಂಶಕ್ಕೆ ಶ್ರಮಿಸಿ : ಶಿವಯೋಗಿ ಕಳಸದ

More Efforts for Academic Results:ಎಸ್‌ಎಸ್‌ಎಲ್‌ಸಿ, ಪಿಯುಸಿ ಉತ್ತಮ ಫಲಿತಾಂಶಕ್ಕೆ ಶ್ರಮಿಸಿ : ಶಿವಯೋಗಿ ಕಳಸದ

District Secretary Shivayogi Kalasadha Calls to Srtive for Better Academic Results

ಬಾಗಲಕೋಟೆ: ಜಿಲ್ಲೆಯಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿ.ಯು.ಸಿ ಯ ಫಲಿತಾಂಶವು ಉತ್ತಮ ರ‍್ಯಾಂಕ್‌ನೊಂದಿಗೆ ಬರಲು ಅಧಿಕಾರಿಗಳು ಶ್ರಮ ವಹಿಸಬೇಕೆಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಶಿವಯೋಗಿ ಕಳಸದ ಹೇಳಿದರು.

ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ಸೋಮವಾರದಂದು ಪ್ರಮುಖ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿ ಮಾತಾನಾಡಿದ ಅವರು, ಮುಂದಿನ ಒಂದೂವರೆ ತಿಂಗಳಲ್ಲಿ ಚುನಾವಣೆ ನೀತಿ ಸಂಹಿತೆ ಜಾರಿಯಾಗುವ ಮುನ್ನವೇ ಹೋಸ ಕಾಮಗಾರಿಗಳಿಗೆ ಚಾಲನೆ ನೀಡುವದಿದ್ದಲ್ಲಿ ತಕ್ಷಣ ಚಾಲನೆ ನೀಡುವಂತಹ ಕಾರ್ಯಗಳಾಗಬೇಕು. ಈಗಾಗಲೇ ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ಪೂರ್ಣಗೊಳಿಸಿ ಉದ್ಘಾಟಣೆಗೊಳಿಸುವ ಕಾರ್ಯವಾಗಬೇಕು. ವಿವೇಕ ಯೋಜನೆಯಡಿಯ ಶಾಲಾ ಕೊಠಡಿಗಳನ್ನು ಮಳೆಗಾಲ ಪ್ರಾರಂಭವಾಗುವ ಮುನ್ನವೇ ಪೂರ್ಣಗೊಳಿಸಬೇಕು ಎಂದರು.

ಕೃಷ್ಣಾ ಮೇಲ್ದಂಡೆ ಯೋಜನೆಯ ಹಿನ್ನೀರಿನಲ್ಲಿ ಮುಳುಗಡೆಗಾಗಿ ಸ್ವಾಧೀನಗೊಂಡ ಕಟ್ಟಡಗಳಲ್ಲಿ ನಡೆಯುತ್ತಿರುವ ಯಾವ ಅಂಗನವಾಡಿಗೂ ಕೂಡ ಬಾಡಿಗೆಯನ್ನು ಮಹಿಳಾ ಮತ್ತು ಮಕ್ಕಳ ಇಲಾಖೆಯೂ ನೀಡಬೇಕಾಗಿರುವುದಿಲ್ಲ. ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯಗಳನ್ನು ಇನ್ನೂ ಉತ್ತಮ ರೀತಿಯಲ್ಲಿ ನಿರ್ವಹಿಸುವುದು ಅಧಿಕಾರಿಗಳ ಜವ್ದಾರಿಯಾಗಿರುತ್ತದೆ ಎಂದು ಸೂಚಿಸಿದರು.

ಜಿಲ್ಲೆಯಲ್ಲಿರುವ ವಿದ್ಯಾರ್ಥಿಗಳ ಸಂಖ್ಯೆಗೂ ಮುಖ್ಯಮಂತ್ರಿ ರೈತ ವಿದ್ಯಾನಿಧಿ ಯೋಜನೆಯಡಿ ನೋಂದಣಿ ಮಾಡಿಕೊಂಡ ವಿದ್ಯಾರ್ಥಿಗಳ ಸಂಖ್ಯೆಗೂ ಒಂದುಕ್ಕೊಂದು ಸರಿಯಾಗಿ ತಾಳೆಯಾಗದೆ ಇರುವುದರಿಂದ ಕೃಷಿ ಇಲಾಖೆಯ ಅಧಿಕಾರಿಗಳು ಪರಿಶೀಲನೆ ಮಾಡುವ ಮೂಲಕ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ವಿಧ್ಯಾನಿಧಿ ಯೋಜನೆಯಡಿ ನೋಂದಣಿ ಮಾಡಿಕೊಳ್ಳುವಂತೆ ಕ್ರಮ ಕೈಗೊಳ್ಳಬೇಕು ಎಂದರು.ಮಾರ್ಚ ಮಾಹೆಯ ಅಂತ್ಯದೊಳಗಾಗಿ ಜಿಲ್ಲಾ ಉತ್ಸವ, ರನ್ನ ಉತ್ಸವ ಮಾಡುವುದಕ್ಕೆ ಸಂಬಂಧಿಸಿದ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕೆಂದು ಹೇಳಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್, ಜಿಲ್ಲಾ ಪಂಚಾಯಿತಿ ಕಾರ್ಯ ನಿರ್ವಾಧಿಕಾರಿ ಟಿ ಭೂಬಾಲನ್ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಸೇರಿದಂತೆ ಇತರರು ಇದ್ದರು.

Leave a comment

Your email address will not be published. Required fields are marked *