Dark Light

Blog Post

Namma Bagalkot > News > Bagalkot > District Valmiki Board Awarded Second Place at the State Level : ಜಿಲ್ಲಾ ವಾಲ್ಮೀಕಿ ಅಭಿವೃದ್ದಿ ನಿಗಮಕ್ಕೆ ರಾಜ್ಯದಲ್ಲಿ 2ನೇ ಸ್ಥಾನ

District Valmiki Board Awarded Second Place at the State Level : ಜಿಲ್ಲಾ ವಾಲ್ಮೀಕಿ ಅಭಿವೃದ್ದಿ ನಿಗಮಕ್ಕೆ ರಾಜ್ಯದಲ್ಲಿ 2ನೇ ಸ್ಥಾನ

ಬಾಗಲಕೋಟೆ:ಪರಿಶಿಷ್ಟ ಪಂಗಡದ ಅಲೆಮಾರಿ ವಸತಿ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಯೋಜನೆಯ ಸೌಲಭ್ಯವನ್ನು ತಲುಪಿಸುವಲ್ಲಿ ಸಮರ್ಪಕವಾಗಿ ಕಾರ್ಯನಿರ್ವಹಿಸಿದ ಜಿಲ್ಲಾ ಮಹರ್ಷಿ ವಾಲ್ಮೀಕಿ ಅಭಿವೃದ್ದಿ ನಿಗಮವು ರಾಜ್ಯದಲ್ಲಿ ಎರಡನೇ ಸ್ಥಾನ ಪಡೆದುಕೊಂಡಿದೆ.
ಯೋಜನೆಯಲ್ಲಿ ಸಮರ್ಪಕ ಅನುಷ್ಠಾನಗೊಳಿಸಿದ ಹಿನ್ನಲೆಯಲ್ಲಿ ಮಹರ್ಷಿ ವಾಲ್ಮೀಕಿ ಅಭಿವೃದ್ದಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಕವಿತಾ ವಾರಂಗಲ್ ಅವರು ನಿಗಮದ ಜಿಲ್ಲಾ ವ್ಯವಸ್ಥಾಪಕರಾದ ಎಸ್.ಎಂ.ನಾಗನೂರ ಅವರಿಗೆ ಪ್ರಶಂಶಣಾ ಪ್ರಮಾಣ ಪತ್ರ ನೀಡಿ ಗೌರವಿಸಿದ್ದಾರೆ. ಈ ಯೋಜನೆಯಡಿ ಜಿಲ್ಲೆಯಲ್ಲಿರುವ ಪರಿಶಿಷ್ಟ ಪಂಗಡದ ಅಲೆಮಾರಿ, ಅರೆ ಅಲೆಮಾರಿ, ಸೂಕ್ಷ್ಮ ಮತ್ತು ಅತೀ ಸೂಕ್ಷ್ಮ ಸಮುದಾಯಗಳಿಗೆ ದೌರ್ಜನ್ಯ ಸಂತ್ರಸ್ತರಿಗೆ, ದೌರ್ಜನ್ಯ ಸಂತ್ರಸ್ತರಿಗೆ, ಮಾಜಿ ದೇವದಾಸಿಯರಿಗೆ, ಅಂತರ್ಜಾತಿ ವಿವಾಹಿತ ದಂಪತಿಗಳಿಗೆ, ವಿಧವೆಯರು, ಒಂಟಿ ಮಹಿಳೆಯರು, ಮೀನುಗಾರರು ಇದ್ದಾರೆ.
ಈ ಯೋಜನೆಯಡಿ ಮನೆ ಕಟ್ಟಿಕೊಳ್ಳಲು 4 ಲಕ್ಷ ರೂ.ಗಳ ಸಹಾಯಧನ ಪಡೆಯಲು ಜಿಲ್ಲೆಯಲ್ಲಿ ಒಟ್ಟು 146 ಅರ್ಜಿಗಳ ಪೈಕಿ 119 ಅರ್ಜಿಗಳನ್ನು ಅನುಮೋದನೆಗೊಂಡಿದ್ದವು. ಈ ಎಲ್ಲ ಫಲಾನುಭವಿಗಳಿಗೆ ನಿವೇಶನ ಮಂಜೂರು ಮಾಡಿ ಮನೆ ಕಟ್ಟಿಕೊಳ್ಳಲು ಹೆಚ್ಚಿನ ಕಾಳಜಿ ವಹಿಸಿದ್ದಾರೆ. ಈ ಹಿನ್ನಲೆಯಲ್ಲಿ ರಾಜ್ಯದಲ್ಲಿ ಬಾಗಲಕೋಟೆ ಜಿಲ್ಲೆ ಎರಡನೇ ಸ್ಥಾನ ಪಡೆದುಕೊಂಡಿದ್ದು, ಉತ್ತಮ ಪ್ರಗತಿ ಸಾಧಿಸಿದ ಜಿಲ್ಲಾ ನಿಗಮದ ಅಧಿಕಾರಿ ಹಾಗೂ ಸಿಬ್ಬಂದಿ ವರ್ಗದವರನ್ನು ಜಿಲ್ಲಾಧಿಕಾರಿ ಪಿ.ಸುನೀಲ್‍ಕುಮಾರ ಅಭಿನಂಧಿಸಿದ್ದಾರೆ.

Leave a comment

Your email address will not be published. Required fields are marked *