Dark Light

Blog Post

Namma Bagalkot > News > Business & Technology > See the Updates of Any Scheme from Your Mobile: ಮೊಬೈಲ್ನಲ್ಲಿಯೇ ನಿಮಗೆ ಯಾವ ಯೋಜನೆಯಿಂದ ಎಷ್ಟು ಹಣ ಬಂದಿದೆ ಎಂದು ನೋಡಿ

See the Updates of Any Scheme from Your Mobile: ಮೊಬೈಲ್ನಲ್ಲಿಯೇ ನಿಮಗೆ ಯಾವ ಯೋಜನೆಯಿಂದ ಎಷ್ಟು ಹಣ ಬಂದಿದೆ ಎಂದು ನೋಡಿ

See how much money you have received from any scheme right on mobile
ಇದೀಗ ರೈತರು ಕೇವಲ ಮೊಬೈಲ್ ನಂಬರ್ ನಮೂದಿಸಿ ಸರ್ಕಾರದ ಯಾವ ಯೋಜನೆಯಿಂದ ಎಷ್ಟು ಹಣ ಜಮಯಾಗಿದೆ ಎಂಬುದನ್ನು ಚೆಕ್ ಮಾಡಬಹುದು. ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ರೈತರಿಗೆ ಎಲ್ಲವೂ ಕುಳಿತಲ್ಲಿಯೇ ಮಾಹಿತಿ ಸಿಗಲೆಂದು ಈ ವ್ಯವಸ್ಥೆಯನ್ನು ಮಾಡಿದೆ.
ಪಿಎಂ ಕಿಸಾನ್ ಯೋಜನೆಯಡಿ ನೋಂದಾಯಿಸಿಕೊಂಡ ರೈತ ಫಲಾನುಭವಿಗಳು ತಮ್ಮ ಖಾತೆಗೆ ಇಲ್ಲಿಯವರೆಗೆ ಎಷ್ಟು ಕಂತುಗಳ ಜಮೆಯಾಗಿದೆ? ಯಾವ ಖಾತೆಗೆ ಜಮೆಯಾಗಿದೆ ಎಂಬುದನ್ನು ಚೆಕ್ ಮಾಡಬಹುದು. https://pmkisan.gov.in/BeneficiaryStatus.aspx ಲಿಂಕ್ ಮೇಲೆ ಕ್ಲಿಕ್ ಮಾಡಬೇಕು, ಎಂಟರ್ ವ್ಯಾಲ್ಯು ಕೆಳಗಡೆ ನಿಮ್ಮ ಮೊಬೈಲ್ ನಂಬರ್ ಹಾಕಬೇಕು. ನಂತರ ಅಲ್ಲಿ ಕಾಣುವ ಕ್ಯಾಪ್ಚ್ಯಾ ಕೋಡ್ ಹಾಕಿದ ಮೇಲೆ ಗೆಟ್ ಡಾಟಾ ಮೇಲೆ ಕ್ಲಿಕ್ ಮಾಡಿದರೆ ಸಾಕು, ಇಲ್ಲಿಯವರೆಗೆ ನಿಮಗೆ ಪಿಎಂ ಕಿಸಾನ್ ಯೋಜನೆಯಡಿ ಎಷ್ಟು ಕಂತುಗಳು ಜಮೆಯಾಗಿದೆ? ಯಾವ ಬ್ಯಾಂಕಿನಿಲ್ಲಿ ಜಮೆಯಾಗಿದೆ? ಎಷ್ಟು ಹಣ ಜಮೆಯಾಗಿದೆ ಎಂಬುದನ್ನು ಚೆಕ್ ಮಾಡಬಹುದು.
ಪ್ರಕೃತಿ ವಿಕೋಪದಿಂದಾಗಿ ಬೆಳೆ ಹಾನಿಯಾದ ರೈತರಿಗೆ ಸರ್ಕಾರವು ಬೆಳೆ ಹಾನಿ ಪರಿಹಾರ ಹಣ ಘೋಷಿಸಿದೆ. ಬೆಳೆ ಹಾನಿಯಾದ ರೈತರು ತಮ್ಮ ಖಾತೆಗೆ ಬೆಳೆ ಹಾನಿ ಪರಿಹಾರ ಹಣ ಜಮೆಯಾಗಿದೆಯೋ ಇಲ್ಲವೋ ಎಂಬುದನ್ನುನೋಡುವುದಲ್ಲದೆ, ಯಾವ ಬ್ಯಾಂಕಿಗೆ ಜಮೆಯಾಗಿದೆ ಎಷ್ಟು ಹಣ ಜಮೆಯಾಗಿದೆ ಎಂಬುದನ್ನು ಸಹ ಚೆಕ್ ಮಾಡಬಹುದು. ಹೌದು, ರೈತರು https://landrecords.karnataka.gov.in/PariharaPayment/
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಬೆಳೆಹಾನಿ ಪರಿಹಾರ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ರೈತರು ಆಧಾರ್ ಸಂಖ್ಯೆ ಆಯ್ಕೆ ಮಾಡಿದ ನಂತರ ಕಾಲಾಮಿಟಿ ಟೈಪ್ ನಲ್ಲಿ ಫ್ಲಡ್ ಹಾಗೂ ಇಯರ್ ನಲ್ಲಿ ಯಾವ ವರ್ಷದ ಬೆಳೆ ಹಾನಿ ಪರಿಹಾರ ಸ್ಟೇಟಸ್ ಚೆಕ್ ಮಾಡಬೇಕೆಂದುಕೊಂಡಿದ್ದೀರೋ ಅದನ್ನು ಆಯ್ಕೆ ಮಾಡಿಕೊಳ್ಳಬೇಕು. ಆಮೇಲೆ ನಿಮ್ಮ ಆಧಾರ್ ಕಾರ್ಡ್ ನಂಬರ್ ಹಾಕಿದ ನಂತರ ಕ್ಯಾಪ್ಚ್ಯಾ ಕೋಡ್ ಹಾಕಿ ವಿವರಗಳನ್ನು ಪಡೆಯಿರಿ ಮೇಲೆ ಕ್ಲಿಕ್ ಮಾಡಿ ಬೆಳೆ ಹಾನಿ ಪರಿಹಾರ ಸ್ಟೇಟಸ್ ಚೆಕ್ ಮಾಡಬಹುದು.

Leave a comment

Your email address will not be published. Required fields are marked *