Dark Light

Blog Post

Namma Bagalkot > News > Art & Entertainment > Team Selection for Street Play: ಬೀದಿ ನಾಟಕ, ಕಲಾತಂಡಗಳ ಆಯ್ಕೆ

Team Selection for Street Play: ಬೀದಿ ನಾಟಕ, ಕಲಾತಂಡಗಳ ಆಯ್ಕೆ

Team selection for street play
ಬಾಗಲಕೋಟೆ: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಪ್ರಸಕ್ತ ಸಾಲಿಗೆ ವತಿಯಿಂದ ಜಿಲ್ಲಾಮಟ್ಟದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ದೌರ್ಜನ್ಯ ಅಧಿನಿಯಮದಲ್ಲಿರುವ ಅಸ್ಪೃಶ್ಯತೆ ನಿವಾರಣೆ ವಿಷಯವನ್ನು ಸಾರ್ವಜನಿಕರಿಗೆ, ವಿಧ್ಯಾರ್ಥಿಗಳಿಗೆ ತಿಳಿಯಪಡಿಸಲು ಬೀದಿ ನಾಟಕದ ಕಲಾ ತಂಡಗಳನ್ನು ಆಯ್ಕೆ ಮಾಡಿಕೊಳ್ಳುವ ಸಲುವಾಗಿ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸುವ ಕಲಾತಂಡದ ಸದಸ್ಯರು ಕಡ್ಡಾಯವಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿರಬೇಕು. ಕಲಾತಂಡವನ್ನು ವಿಶೇಷ ಘಟಕ ಯೋಜನೆಯಡಿ (ಪರಿಶಿಷ್ಟ ಜಾತಿ) ಮತ್ತು ಗಿರಿಜನ ಉಪಯೋಜನೆಯಡಿ (ಪರಿಶಿಷ್ಟ ಪಂಗಡ) ಪ್ರತ್ಯೇಕವಾಗಿ ಆಯ್ಕೆ ಮಾಡಲಾಗುತ್ತಿದೆ. ತಂಡದ ಎಲ್ಲಾ ಕಲಾವಿದರು ಇತ್ತೀಚಿನ ಆರ್.ಡಿ ಸಂಖ್ಯೆ ಹೊಂದಿರುವ ಜಾತಿ ಪ್ರಮಾಣ ಪತ್ರ, ವಯಸ್ಸಿನ ದಾಖಲೆ, ಆಧಾರ್ ಕಾರ್ಡ, ಪಡಿತರ ಚೀಟಿ ನಕಲು ಅರ್ಜಿಯೊಂದಿಗೆ ಸಲ್ಲಿಸತಕ್ಕದ್ದು.
ನಾಟಕ ತಂಡಗಳು 10 ರಿಂದ 15 ಜನ ಕಲಾವಿದರನ್ನು ಹೊಂದಿರಬೇಕು ಹಾಗೂ ಈ ತಂಡವು ಕನಿಷ್ಠ 3 ಯಶಸ್ವಿ ಬೀದಿ ನಾಟಕ ಕಾರ್ಯಕ್ರಮವನ್ನು ನೀಡಿರುವ ಕುರಿತು ಸೂಕ್ತ ದಾಖಲೆಯನ್ನು ಸಲ್ಲಿಸತಕ್ಕದ್ದು. ತಂಡದ ಆಯ್ಕೆಯನ್ನು ಇಲಾಖೆಯ ಜಿಲ್ಲಾ ಮಟ್ಟದ ಸಮಿತಿಯಿಂದ ಆಯ್ಕೆ ಮಾಡಲಾಗುವುದು. ಈ ಸಮಿತಿಯ ನಿರ್ಧಾರವೇ ಅಂತಿಮವಾಗಿರುತ್ತದೆ. ಅರ್ಜಿ ಸಲ್ಲಿಕೆಗೆ ಕೊನೆಯ ದಿನ ಜನವರಿ 21 ಆಗಿದೆ. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಚೇರಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬಾಗಲಕೋಟೆ ಇವರನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

Leave a comment

Your email address will not be published. Required fields are marked *