Dark Light

Blog Post

Namma Bagalkot > News > Jobs > Anganwadi Workers Selction: ಅಂಗನವಾಡಿ ಸಹಾಯಕಿ ಹುದ್ದೆಯ ತಾತ್ಕಾಲಿಕ ಪಟ್ಟಿ ಪ್ರಕಟ

Anganwadi Workers Selction: ಅಂಗನವಾಡಿ ಸಹಾಯಕಿ ಹುದ್ದೆಯ ತಾತ್ಕಾಲಿಕ ಪಟ್ಟಿ ಪ್ರಕಟ

Temporary List of Anganwadi Assistants Appointment Out
ಬಾಗಲಕೋಟೆ : ತಾಲೂಕಿನ ಶಿಶು ಅಭಿವೃದ್ಧಿ ಯೋಜನೆಯ ವ್ಯಾಪ್ತಿಯಲ್ಲಿ ಬರುವ 2 ಅಂಗನವಾಡಿ ಕಾರ್ಯಕರ್ತೆ ಹಾಗೂ 20 ಅಂಗನವಾಡಿ ಸಹಾಯಕಿ ಹುದ್ದೆಗಳ ತಾತ್ಕಾಲಿಕ ಪಟ್ಟಿ ಪ್ರಕಟಿಸಲಾಗಿದೆ.
ಹಿರೇಗುಳಬಾಳ-1ರ ಅಂಗನವಾಡಿ ಕಾರ್ಯಕರ್ತೆ ಹಾಗೂ ಲವಳೇಶ್ವರ ಎಲ್.ಟಿ ಅಂಗನವಾಡಿ ಕೇಂದ್ರದ ಅಂಗನವಾಡಿ ಸಹಾಯಕಿ ಹುದ್ದೆಗಳ ಅಂತಿಮ ಆಯ್ಕೆ ಪಟ್ಟಿಯನ್ನು ಹಾಗೂ ಸಂಗೊಂದಿ ಆರ್.ಸಿ ಅಂಗನವಾಡಿ ಕೇಂದ್ರದ ಸಹಾಯಕಿ ಹುದ್ದೆಯ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಸಂಬಧಪಟ್ಟ ಅಂಗನವಾಡಿ ಕೇಂದ್ರಗಳಲ್ಲಿ ಹಾಗೂ ಸಿ.ಡಿ.ಪಿ.ಓ ಕಛೇರಿಯ ಸೂಚನಾ ಫಲಕಕ್ಕೆ ಅಳವಡಿಸಲಾಗಿದೆ. ತಾತ್ಕಾಲಿಕ ಆಯ್ಕೆ ಪಟ್ಟಿಗೆ ಸಂಬಂಧಿಸಿದಂತೆ ತಕರಾರು ಇದ್ದಲ್ಲಿ ಸೂಕ್ತ ದಾಖಲಾತಿಗಳೊಂದಿಗೆ ಜನವರಿ 18 ರೊಳಗಾಗಿ ಲಿಖಿತ ರೂಪದಲ್ಲಿ ಸಲ್ಲಿಸಬೇಕು. ತಾತ್ಕಾಲಿಕ ಆಯ್ಕೆಯಾದ ಅಭ್ಯರ್ಥಿಗಳು ಜನವರಿ 19 ರಂದು ಬೆ.10 ಗಂಟೆಗೆ ಮೂಲ ದಾಖಲೆಗಳ ಪರಿಶೀಲನೆಗೆ ಹಾಜರಾಗುವಂತೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a comment

Your email address will not be published. Required fields are marked *