Dark Light

Blog Post

Namma Bagalkot > News > Bagalkot > Tractor Accident- 3 Died: ಟ್ರ್ಯಾಕ್ಟರ್ ಪಲ್ಟಿ, ಮೂವರ ಸಾವು

Tractor Accident- 3 Died: ಟ್ರ್ಯಾಕ್ಟರ್ ಪಲ್ಟಿ, ಮೂವರ ಸಾವು

Tractor Accident- 3 Died
ಬಾಗಲಕೋಟೆ: ಸವದತ್ತಿ ಯಲ್ಲಮ್ಮನ ಗುಡ್ಡದ ಜಾತ್ರೆಯಿಂದ ವಾಪಸ್ಸಾಗುತ್ತಿದ್ದ ವೇಳೆ ಟ್ರ್ಯಾಕ್ಟರ್ ಪಲ್ಟಿಯಾಗಿ ಮೂವರು ಮೃತಪಟ್ಟಿರುವ ಘಟನೆ ಮುಧೋಳ ತಾಲೂಕಿನ ಕುಳಲಿ ಗ್ರಾಮದ ಬಳಿ ಶುಕ್ರವಾರ ಸಂಭವಿಸಿದೆ.
ರಬಕವಿ-ಬನಹಟ್ಟಿ ತಾಲೂಕಿನ ನಾವಲಗಿ ಗ್ರಾಮದ ಗೋವಿಂದ(20), ಹನಮಂತ(20) ಸ್ಥಳದಲ್ಲೇ ಅಸುನೀಗಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಸದಾಶಿ(18) ಎಂಬಾತ ಚಿಕಿತ್ಸೆ ಫಲಕಾರಿಯಾಗದೆ ಬಾಗಲಕೋಟೆ ಜಿಲ್ಲಾಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ.
ಮುಂದೆ ಹೋಗುತ್ತಿದ್ದ ಟ್ರ್ಯಾಕ್ಟರ್ ಗೆ ಹಿಂದಿನಿಂದ ಬಂದು ರಭಸದಿಂದ ಮತ್ತೊಂದು ಟ್ರ್ಯಾಕ್ಟರ್ ಗುದ್ದಿದ್ದಾಗ ಭಕ್ತರು ತೆರಳುತ್ತಿದ್ದ ಟ್ರ್ಯಾಕ್ಟರ್ ಪಲ್ಟಿಯಾಗಿದೆ. ಘಟನೆಯಲ್ಲಿ ಮೃತರ ಹೊರತಾಗಿ ಇನ್ನೂ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದ್ದು, 10 ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಮುಧೋಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Leave a comment

Your email address will not be published. Required fields are marked *